Ad Widget

ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಕುಕ್ಕುಜಡ್ಕ ವಠಾರದಲ್ಲಿ ಸ್ವಚ್ಛತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.23ರಂದು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕುಕ್ಕುಜಡ್ಕ ವಠಾರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ಹೆಕ್ಕುವ ಮೂಲಕ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರ್ತ್ಯಡ್ಕ, ಪದಾಧಿಕಾರಿಗಳಾದ ಸಂಧ್ಯಾ, ವೀಣಾ, ಮಧುಶ್ರೀ, ಸ್ಥಾಪಕಾಧ್ಯಕ್ಷೆ ಉಷಾಲತಾ ಹಾಗೂ ಇತರ ಸದಸ್ಯೆಯರು ಉತ್ಸಾಹಭರಿತವಾಗಿ ಭಾಗವಹಿಸಿ, ಪರಿಸರ ಶುದ್ಧೀಕರಣದ ಮಹತ್ವವನ್ನು ಸಾರ್ವಜನಿಕರಿಗೆ ಸಾರಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading