Ad Widget

ಕಡಬ : ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮ ; “ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಕಾಲಕಾಲಕ್ಕೆ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು” : ಹಿರಿಯ ವೈದ್ಯ ಡಾ| ಸಿ.ಕೆ ಶಾಸ್ತ್ರಿ

ಕಡಬ, ಡಿ.28 : “ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಕಾಲಕಾಲಕ್ಕೆ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಶಿಬಿರವನ್ನು ಆಯೋಜಿಸಿದ ಕಡಬದ ಪತ್ರಕರ್ತರ ಸಂಘ ಮತ್ತು ಟೀಮ್ ಈಶ್ವರ ಮಲ್ಪೆ ಅವರ ಕಾರ್ಯ ಶ್ಲಾಘನೀಯ” ಎಂದು ಕಡಬದ ಹಿರಿಯ ವೈದ್ಯರಾದ ಡಾ| ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು.
ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಭಾನುವಾರದಂದು ಕಡಬದ ಪ್ರೆಸ್ ಕ್ಲಬ್ ನಲ್ಲಿ ನಡೆದ “ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. “ಇಂದಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಶ್ರವಣ ದೋಷ ಕಾಣಿಸಿಕೊಳ್ಳುತ್ತಿದ್ದು, ಇದನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಬಹಳ ಮುಖ್ಯವಾಗಿದೆ. ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಶ್ರವಣ ದೋಷಕ್ಕೆ ಪರಿಣಾಮಕಾರಿ ಚಿಕಿತ್ಸೆಗಳು ಲಭ್ಯವಿದ್ದು, ಜನರು ಅದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಟೀಮ್ ಈಶ್ವರ ಮಲ್ಪೆ ಸಂಘಟನೆಯ ಸಂಚಾಲಕ ಲವ ಬಂಗೇರ ಅವರು ಮಾತನಾಡಿ “ನಮ್ಮ ಸಂಘಟನೆಯ ಮೂಲಕ ನಡೆಯುತ್ತಿರುವ 68ನೇ ಶಿಬಿರ ಇದಾಗಿದ್ದು, ಶಿಬಿರಗಳಿಂದ ಸಾವಿರಾರು ಜನಕ್ಕೆ ಪ್ರಯೋಜನವಾಗಿದೆ. ಶ್ರವಣ ಸಮಸ್ಯೆಗೆ ಸಂಬಂಧಿಸಿದ ಶಿಬಿರಗಳು ನಡೆಯುವುದು ವಿರಳವಾಗಿದ್ದು, ಪತ್ರಕರ್ತರ ಸಂಘದ ಸಹಕಾರದೊಂದಿಗೆ ನಾವು ದ.ಕ. ಜಿಲ್ಲೆಯಾದ್ಯಂತ ಈ ಶಿಬಿರವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆಯವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಟೀಮ್ ಈಶ್ವರ್ ಮಲ್ಪೆ ತಂಡದ ವೈದ್ಯಾಧಿಕಾರಿಗಳಾದ ಡಾ| ಪವನ್, ಡಾ| ಉದಯನ್ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ನಿಯೋಜಿತ ಅಧ್ಯಕ್ಷರಾದ ಕೆ.ಎಸ್ ಬಾಲಕೃಷ್ಣ ಕೊಯಿಲ ಉಪಸ್ಥಿತರಿದ್ದರು.

ನಿಯೋಜಿತ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading