Ad Widget

ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಎಂ. ಬಾಪು ಸಾಹೇಬ್ ಮತ್ತು ನೆಕ್ರಪ್ಪಾಡಿ ಕೃಷ್ಣಪ್ಪ ಗೌಡರಿಗೆ ಸನ್ಮಾನ

ರಾಷ್ಟೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಇವರ ಆದೇಶದ ಮೇರೆಗೆ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಬ್ಬರು ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಇಂದು ನಡೆಯಿತು.

. . . . . . . . .

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರ ನೇತೃತ್ವದಲ್ಲಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅಪಾರ ಕೊಡುಗೆ ನೀಡಿರುವ, ಹಾಗೂ ಧೀರ್ಘಕಾಲ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಎಂ ಬಾಪು ಸಾಹೇಬ್ ಅರಂಬೂರು ಹಾಗೂ ಐವರ್ನಾಡಿನ ನೆಕ್ರಪ್ಪಾಡಿ ಕೃಷ್ಣಪ್ಪ ಗೌಡರವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

. . . . . . .

ಪ್ರಸ್ತಾವಿಕವಾಗಿ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ದ ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯ ನಂದರಾಜ್ ಸಂಕೇಶ್, ಇಂಟಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ದೊಡ್ಡಡ್ಕ, ಯುವ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಪ್ರೇಮ ಹರೀಶ್ವರನ್ (ಗಾಂಧಿ) ಅಡ್ಯಡ್ಕ, ಕಾಂಗ್ರೆಸ್ ಮುಖಂಡ ತವೀದ್ ಕಲ್ಚರ್ಪೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸುಳ್ಯ ಬ್ಲಾಕ್ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸತೀಶ್ ಕಲ್ಲುಗುಂಡಿ, ಕಾಂಗ್ರೆಸ್ ಮುಖಂಡ ಶಿವರಾಮ್ ನೆಕ್ರಪ್ಪಾಡಿ ಮತ್ತು ಇಬ್ಬರೂ ಮುಖಂಡರ ಮನೆಯವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿದ ಹಿರಿಯ ಮುಖಂಡರಾದ ಎಂ ಬಾಪು ಸಾಹೇಬ್ ಹಾಗೂ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ ಕೃತಜ್ಞತೆ ಸಲ್ಲಿಸಿ ಆಶೀರ್ವಾದ ಸಲ್ಲಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading