Ad Widget

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನದ ಮಾಲಿಕೆ ಪ್ರಸ್ತುತಿ ; ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ರಿಂದ ಅದ್ಭುತ ಪ್ರದರ್ಶನ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮೈಸೂರು ಸಾಂಸ್ಕೃತಿಕ ಉಪ ಸಮಿತಿ ಇದರ ವತಿಯಿಂದ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 22 ರಿಂದ ಜನವರಿ 26(ಗಣ ರಾಜ್ಯೋತ್ಸವ ದಿನಾಚರಣೆ) ವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಂಡ
ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನದ ಪರ್ಯಟನೆ ಮಾಲಿಕೆಯನ್ನು ಸುಳ್ಯ ಗ್ರೀನ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಯಿತು.
ನ್ಯಾಯಾಂಗ ಇಲಾಖೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಈ ಹಿಂದೆ ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸಿ  ಪ್ರಸ್ತುತ ಮೈಸೂರಿನಲ್ಲಿರುವ ಜನಾರ್ಧನ್ ರವರ ಪುತ್ರಿ ಸೋನಿಕಾ ಜನಾರ್ಧನ್ ರವರು ಪ್ರಸ್ತುತಿ ಪಡಿಸಿದರು.
ಅಭಿಯಾನ ವನ್ನು ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಗ್ರೀನ್ ವ್ಯೂ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಘಟಕದ ಅಧ್ಯಕ್ಷ ಪಿ.ಬಿ. ಸುಧಾಕರ್ ರೈ ಭಾಗವಹಿಸಿದ್ದರು.
ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಸಂಯೋಜಕರುಗಳಾದ ಕೆ.ಎಸ್. ಉಮ್ಮರ್, ಶಾಫಿ ಕುತ್ತಾಮೊಟ್ಟೆ, ಪತ್ರಕರ್ತ ಹಸೈನಾರ್ ಜಯನಗರ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಣ ಸ್ವಾಗತಿಸಿ ವಂದಿಸಿದರು.
ವಿದ್ಯಾರ್ಥಿಗಳಲ್ಲಿ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವುದು, ಸಂವಿದಾನದ ಸೌಂದರ್ಯವನ್ನು ಹಾಡಿನ ಮೂಲಕ ಪ್ರಚುರ ಪಡಿಸುವುದು ಈ ಅಭಿಯಾನದ ಉದ್ದೇಶ. ಈ ಬಾಲ ಕಲಾವಿದೆ ಮೋನಿಕಾ ರವರ ಪ್ರತಿಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ. ಮಹದೇವಪ್ಪ  ಶ್ಲಾಘಿಸಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading