Ad Widget

ಪಂಜ : ಜ.18ರಂದು “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಸ್ಪರ್ಧೆ”

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ.) ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ(ರಿ.) ಮಂಗಳೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದೊಂದಿಗೆ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಸಹಕಾರದೊಂದಿಗೆ “ರಾಜ್ಯ ಮಟ್ಟದ ಯುವ ಸಂಭ್ರಮ”ದ ಸಂದರ್ಭದಲ್ಲಿ ಜ.18 ಆದಿತ್ಯವಾರದಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಪೂರ್ವಾಹ್ನ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಸ್ಪರ್ಧೆ” ನಡೆಯಲಿದ್ದು, ಹೆಚ್.ಎಫ್, ಜರ್ಸಿ ಮತ್ತು ದೇಶಿ ತಳಿಗಳ ವಿಭಾಗಗಳಲ್ಲಿ 0-6, 6-12 ಹಾಗೂ 12 ತಿಂಗಳು ಮೇಲ್ಪಟ್ಟ ವಯೋಮಾನದ ಗುಂಪುಗಳಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ ಎಂದು ಸ್ಪರ್ಧಾ ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 8197092714, 7019793749 ಸಂಪರ್ಕಿಸಬಹುದಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading