Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಚಲನಚಿತ್ರ ನಟಿ ಶ್ರುತಿ

ಸುಬ್ರಹ್ಮಣ್ಯ ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.
ಶ್ರೀ ದೇವಳದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ಸಲ್ಲಿಸಿದ ಅವರು ಹೊಸಳಿಗಮ್ಮ ದೈವದ ಗುಡಿಗೆ ತೆರಳಿದ ದರುಶನ ಪಡೆದರು.
ಸತ್ಯನಾರಾಯಣ ಅಸ್ರಣ್ಣ  ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು.
ತದನಂತರ ಶ್ರೀ ದೇವಳದ  ಆಡಳಿತ ಕಚೇರಿಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ಶಾಲು ಹೊಂದಿಸಿ ಶೃತಿ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಅಜಿತ್ ಪಾಲೇರಿ, ಸೌಮ್ಯ ಭರತ್, ಲೀಲಾ ಮನಮೋಹನ್, ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಅಚ್ಚುತ ಗೌಡ ಬಳ್ಪ, ದೇವಳದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ  ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.
ನಂತರ ಶ್ರೀ ದೇವಳದಲ್ಲಿ ಭೋಜನ ಪ್ರಸಾದ ಸ್ವೀಕರಿಸಿ ತೆರಳಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading