Ad Widget

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ನಿಧನ

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದಿತ್ತು. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪಂಜ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಪಡ್ಪಿನಂಗಡಿಯ ಯುವಕ ಮಂಡಲ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.‌
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading