Ad Widget

ಕರ್ನಾಟಕದ ಭಕ್ತರ ಅನುಕೂಲತೆಗೆ ಶಬರಿಮಲೆಯಲ್ಲಿ ಸಹಾಯವಾಣಿ ಕೇಂದ್ರ

ಸುಬ್ರಹ್ಮಣ್ಯ : ಕೇಳರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲತೆಗಾಗಿ ಸಹಾಯವಾಣಿ ಕೇಂದ್ರವನ್ನು ಕರ್ನಾಟಕ ಸರಕಾರ ತೆರೆದಿದೆ. ಇದರಿಂದಾಗಿ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭದಲ್ಲಿ ಸಹಕಾರ ದೊರಕಲಿದೆ.
ಶಬರಿ ಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುವ ಕಾರಣ ಯಾತ್ರಾರ್ಥಿಗಳಿಗೆ ಸೂಕ್ತ ಸಹಕಾರ ನೀಡಲು ಮತ್ತು ಸೂಕ್ತ ಮಾಹಿತಿ ಒದಗಿಸಲು ಸಹಾಯವಾಣಿ ಕೇಂದ್ರವನ್ನು ಮುಜರಾಯಿ ಇಲಾಖೆ ಶಬರಿಮಲೆಯಲ್ಲಿ ಆರಂಭಿಸಿದೆ.ಜ.14ರಿಂದ 19ರ ತನಕ ಕೇಂದ್ರವು ಕಾರ್ಯಾಚರಿಸಲಿದೆ. ಸಹಾಯವಾಣಿ ಕೇಂದ್ರಕ್ಕೆ ಬೆಂಗಳೂರಿನ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಮೋಹನ್ ಕುಮಾರ್, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಕುಕ್ಕೆ ದೇವಳದ ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಇವರನ್ನು ಸಹಾಯವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಮುಜರಾಯಿ ಇಲಾಖೆ ನಿಯೋಜಿಸಿದೆ.
ಅತ್ಯಧಿಕ ಸಂಖ್ಯೆಯಲ್ಲಿ ಕರ್ನಾಟದ ಭಕ್ತರು ಈ ಸಂದರ್ಭ ಶಬರಿಮಲೆ ಯಾತ್ರೆ ಕೈಗೊಳ್ಳುವ ಕಾರಣ ಕರ್ನಾಟಕದ ಭಕ್ತರಿಗೆ ತುರ್ತು ಸಂದರ್ಭದಲ್ಲಿ ಕೇಂದ್ರವು ಸಹಕಾರ ನೀಡಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading