Ad Widget

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಬೆಳ್ಳಾರೆ ವಸತಿ ನಿಲಯಕ್ಕೆ ಭೇಟಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ.ಸಿ ರವರ ಸೂಚನೆಯಂತೆ ಬೆಳ್ಳಾರೆಯ ಶ್ರೀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಸರ್ವೇ ನಡೆಸಿದರು.
ನೂತನ ಕಟ್ಟಡದ ಅವಶ್ಯಕತೆ ಇದ್ದು, ಜೊತೆಗೆ ಇತರೆ ಸೌಲಭ್ಯಗಳ ಅಗತ್ಯತೆಯ ಬಗ್ಗೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು. ಮನವಿಗಳನ್ನು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಮಹಿಳಾ ಮೋರ್ಚಾದ ಸದಸ್ಯರು ಭರವಸೆ ನೀಡಿದರು.
ಜೊತೆಗೆ ವಸತಿ ನಿಲಯದ ಪಕ್ಕದಲ್ಲಿರುವ ಗ್ರಾಮ ಪಂಚಾಯತ್ ಜಾಗದ ಸುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸಲು ಸಂಬಂಧಪಟ್ಟವರಿಗೆ ಮನವಿ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಇಂದಿರಾ.ಬಿ.ಕೆ, ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಆಶಾ ರೈ ಕಲಾಯಿ, ಸದಸ್ಯರುಗಳಾದ ಸುಜಾತಾ ಐವರ್ನಾಡು, ದಿವ್ಯಾ ಮಡಪ್ಪಾಡಿ, ದಿವ್ಯಾ ಯೋಗಾನಂದ, ಶಶಿಕಲಾ.ಆರ್ ರೈ ಬೇಲ್ಯ, ಒಬಿಸಿ ಮೋರ್ಚಾ ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ ಹಾಗೂ ಬಿಜೆಪಿ ಕಾರ್ಯಕರ್ತರಾದ ಪುಷ್ಪಾವತಿ ಕೇಕುಡೆ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading