Ad Widget

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಎಂ.ಎಲ್.ಸಿ ಮಂಜುನಾಥ್ ಭಂಡಾರಿ ಭೇಟಿ

ಸುಬ್ರಹ್ಮಣ್ಯ ಜನವರಿ 20 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೋಮವಾರ ಸಂಜೆ ಭೇಟಿ ನೀಡಿ ಸದಸ್ಯರುಗಳು, ಅಧಿಕಾರಿ ವರ್ಗದವರನ್ನು ಹಾಗೂ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಜವಾಬ್ದಾರಿಗಳನ್ನು” ವಿವರವಾಗಿ ತಿಳಿಸಿದರು‌‌. ಅಲ್ಲದೆ “ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಯವರನ್ನು ಪಂಚಾಯತ್ ಗೆ ಬರಬೇಕಾದ ಸಂಪನ್ಮೂಲಗಳನ್ನು ಕ್ರೂಡೀಕರಿಸುವುದರೊಂದಿಗೆ ಹೆಚ್ಚು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮಾಲೋಚಿಸಿಕೊಂಡು  ಮಾಡಬೇಕೆಂಬುದಾಗಿ” ತಿಳಿಸಿದರು.
“ಒಂದು ಗ್ರಾಮ ಪಂಚಾಯತ್ ಅಂದಮೇಲೆ ಅಲ್ಲಿ ಬೇರೆ ಬೇರೆ ಕಚೇರಿಗಳು, ವಿಶಾಲವಾದ ಸಭಾಂಗಣ, ಕಂಪ್ಯೂಟರ್ ಕೊಠಡಿ, ಗ್ರಂಥಾಲಯ ಇತ್ಯಾದಿಗಳನ್ನು ಒಳಗೊಂಡಿರಬೇಕು. ಸಾರ್ವಜನಿಕರು ಯಾವ ಹೊತ್ತಿಗೆ ಬೇಕಾದರೂ ಬಂದು ತಮ್ಮ ಕುಂದು ಕೊರತೆಗಳನ್ನ ನಿವಾರಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಯವರು ಗ್ರಾಮ ಪಂಚಾಯತ್ ಗೆ ಬಂದ  ಗ್ರಾಮದ ಜನರನ್ನು ವಿಚಾರಿಸಿ ಅವರಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡುವುದು ಅತ್ಯಗತ್ಯ” ಎಂದರು.
“ಯಾವುದೇ ಕಚೇರಿ ಕೆಲಸ ಕಾರ್ಯಗಳನ್ನು ಕ್ಲಪ್ತ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ  ಮಾಡಿಕೊಡಬೇಕೆಂದು” ತಾಕಿತು ಹಾಕಿದರು. ಹಾಗೆಯೇ “ನಾನು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆದ್ದರಿಂದ ಸರ್ಕಾರದಿಂದ ದೊರಕು ಅನುದಾನವನ್ನು ದೊರಕಿಸಿಕೊಡುವಲ್ಲಿ  ಪ್ರಯತ್ನವನ್ನು ಪಡುತ್ತೇನೆ. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಗ್ರಾಮ ಪಂಚಾಯತ್ ಗೆ ಸೇರಿದ ಆಸ್ತಿಗಳನ್ನು ರಕ್ಷಣೆ ಮಾಡಿ, ಅಭಿವೃದ್ಧಿಗೊಳಿಸಿ, ಆರ್ಥಿಕ ಕ್ರೂಢೀಕರಣ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು” ತಿಳಿಸಿದರು.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಡಬ ತಾಲೂಕು ಪಂಚ ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಸುದೀರ್ ಕುಮಾರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ, ಪಿಡಿಓ ಮಹೇಶ್, ಕಾರ್ಯದರ್ಶಿ ಮೋನಪ್ಪ.ಡಿ, ಕಡಬ  ತಾಲೂಕು ಕಂದಾಯ ನಿರೀಕ್ಷಕ ಪೃಥ್ವಿರಾಜ್ ಮುಂತಾದರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳು, ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading