Ad Widget

ಕುಕ್ಕೆ ಸುಬ್ರಹ್ಮಣ್ಯ : ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕ ತಂಡಕ್ಕೆ ಭವ್ಯ ಸ್ವಾಗತ

ಸುಬ್ರಹ್ಮಣ್ಯ : ರಾಷ್ಟ್ರ ಮಟ್ಟದ  ನೆಟ್ ಬಾಲ್ ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಚಿನ್ನದ ಪದಕ ಪಡೆದ ಬಾಲಕಿಯರ ಕರ್ನಾಟಕ ತಂಡಕ್ಕೆ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಆಡಳಿತ ಮಂಡಳಿ,  ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ  ಮಂಗಳವಾರ ಭವ್ಯವಾಗಿ ಸ್ವಾಗತಿಸಲಾಯಿತು.
ವಿಜೇತ ತಂಡ ಮತ್ತು  ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಆಟವಾಡಿದ್ದ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿನಿ ತಪಸ್ಯಾ.ಎಸ್ ನಾಯಕ್ ಅವರನ್ನು ಅದ್ದೂರಿಯಾಗಿ  ಶ್ರೀ ದೇವಳದ ಮುಂಭಾಗದಲ್ಲಿ ಗೌರವಿಸಲಾಯಿತು.
   
ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಿಂದ ತೆರೆದ ವಾಹನದಲ್ಲಿ ಎಸ್.ಎಸ್.ಪಿ.ಯು ಕಾಲೇಜಿನ ತನಕ ಭವ್ಯ ಮೆರವಣಿಗೆ ನಡೆಸಲಾಯಿತು. ಕೇರಳದ ಚೆಂಡೆ ಮತ್ತು ಅಲಂಕಾರಿಕ ಕೊಡೆಗಳು ಮೆರವಣಿಗೆಯ ಪ್ರಧಾನ ಆಕರ್ಷಣೆಯಾಗಿತ್ತು. ಮೆರವಣಿಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೀಲಾ ಮನಮೋಹನ್ ಉದ್ಘಾಟಿಸಿದರು.
ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಪವನ್ ಎಂ.ಡಿ ಮುಖ್ಯ ಅತಿಥಿಗಳಾಗಿದ್ದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಸೋಮಶೇಖರ ನಾಯಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಉಪಾಧ್ಯಕ್ಷರಾದ ಲೋಕೇಶ್ ಬಿ.ಎನ್,  ದೀಪಕ್ ನಂಬಿಯಾರ್, ಕಾರ್ಯದರ್ಶಿ ರತ್ನಾಕರ.ಎಸ್,
ಶಿಕ್ಚಕ ರಕ್ಷಕ ಸಂಘದ ಅಧ್ಯಕ್ಷೆ
ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷ ಗುಣವರ್ಧನ ಕೆದಿಲ, ಪ್ರಮುಖರಾದ ಪ್ರೇಮನಾಥ ಶೆಟ್ಟಿ, ನವೀನ್ ಹೆಗ್ಡೆ, ತುಷಾರ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading