Ad Widget

ಪಂಜ : ಜ.24 ರಿಂದ ಫೆ.9 ವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ – ಗೊನೆ ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ ಫೆ.9 ತನಕ ನಡೆಯಲಿದ್ದು, ಇದರ ಅಂಗವಾಗಿ ಜ.24 ರಂದು  ಗೊನೆ ಮುಹೂರ್ತ ನಡೆಯಿತು. ಕುದ್ವ ತೋಟದಲ್ಲಿ ಗೊನೆ ಕಡಿದು ಬ್ಯಾಂಡ್‌ ವಾಲಗದ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಸಂತೋಷ್ ಕುಮಾ‌ರ್ ರೈ ಬಳ್ಳ, ಧರ್ಮಪಾಲ ಗೌಡ ಮರಕ್ಕಡ, ಧರ್ಮಣ್ಣ ನಾಯ್ಕ ಗರಡಿ, ಶ್ರೀಮತಿ ಮಾಲಿನಿ ಕುದ್ದ, ಶ್ರೀಮತಿ ಪವಿತ್ರ ಮಲ್ಲೆಟಿ, ಸತ್ಯನಾರಾಯಣ ಭಟ್ ರಾಮಚಂದ್ರ ಭಟ್, ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಗುತ್ತು,ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಮೋನಪ್ಪ ನಾಯ್ಕ ಸೌಧಾಮಿನಿ, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading