Ad Widget

ಕ್ರೀಡೆ ಆರೋಗ್ಯವಂತ ಮನುಷ್ಯನ ನಿಜವಾದ ಗುಟ್ಟು: ಚಂದ್ರಶೇಖರ ಕೆ. ಎಸ್ ;  ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಕ್ರೀಡಾಕೂಟ

. . . . . . . . .

. . . . . . .

ಕ್ರೀಡೆ ಅರೋಗ್ಯವಂತ ಮನುಷ್ಯನ ಜೀವನದ ಗುಟ್ಟು. ನಿಜವಾದ ಕ್ರೀಡಾಪಟು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರುತ್ತಾನೆ ಮತ್ತು ದೇಶದ ಪ್ರಗತಿಯಲ್ಲಿ ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಸುಳ್ಯ ತಾಲೂಕು ಅಧ್ಯಕ್ಷರಾದ ಕೆ ಎಸ್ ಚಂದ್ರಶೇಖರ ಹೇಳಿದರು. ಅವರು ದಿನಾಂಕ 25 ಜನವರಿ 2026 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧೀನಗರ ಸುಳ್ಯದಲ್ಲಿ ನಡೆದ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಯ ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ವೆಂಕಟ್ರಮಣ ಬೇರ್ಪಡ್ಕ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ಮಹಾಲಿಂಗನ್ ಬಾಜರತೊಟ್ಟಿ ಹಾಗೂ ಕ್ರೀಡಾಪಟು ಗಣೇಶ್ ಪಾಟಾಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಎ. ಎಂ ಸ್ವಾಗತಿಸಿ, ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು, ಸಚಿತ್ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading