Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಭೇಟಿ

ಸುಬ್ರಹ್ಮಣ್ಯ ಜನವರಿ 27 : ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ.27ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಈ ಸಂದರ್ಭದಲ್ಲಿ ಶ್ರೀ ದೇವಳಕ್ಕೆ ಭೇಟಿ ನೀಡಿದರು.
ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಳದ ಪರವಾಗಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಸಂಸದರನ್ನು ಪೂರ್ಣಕುಂಭ ಸ್ವಾಗತದೊಂದಿಗೆ  ಬರಮಾಡಿಕೊಂಡರು. ತದನಂತರ ಒಡೆಯರ್ ರವರು ಶ್ರೀ ದೇವಳದಲ್ಲಿ ಫಲಹಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಿಷ್ಟಾಚಾರ ವಿಭಾಗದ ಜಯರಾಮರಾವ್, ಪ್ರಮೋದ್, ಗೋಪಿನಾಥ್ ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading