ಪಂಜ : ಯಕ್ಷಗಾನ ಪದರ್ಶನ – ಸನ್ಮಾನ

ಯಕ್ಷ ಮಿತ್ರರು ಪಂಜ ಇದರ ಆಶ್ರಯದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಸಹಯೋಗದೊಂದಿಗೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ದ್ವಜಾರೋಹನದ ಅಂಗವಾಗಿ  ಸಶಿಹಿತ್ಲು ಶ್ರೀ ಭಗವತೀ ಪ್ರಸಾದಿತ ಯಕ್ಷಗಾನ ಮಂಡಳಿ ಸಶಿಹಿತ್ಲು ಮಂಗಳೂರು ಇವರಿಂದ ಬಂಟಮಲೆ ಭಾರ್ಗವಿ ಎಂಬ ತುಳು ಯಕ್ಷಗಾನ ಪದರ್ಶನಗೊಂಡಿತು.
ಈ  ಸಂದರ್ಭದಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ ಯಂ ಆರ್ ಹರಿಯಪ್ಪ ಅವರನ್ನು ರಾಜ್ಯ ಪ್ರಶಸ್ತಿ ವಿಜೇತರಾದ ಅಶೋಕ್  ಶೆಟ್ಟಿ ಸರಪಾಡಿ  ಸನ್ಮಾನಿಸಿದರು.

ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ,ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ‌ ಅಧ್ಯಕ್ಷರಾದ ಹಿತೇಶ್ ಪಂಜದಬೈಲು ಹಾಗೂ ಯಕ್ಷ ಮಿತ್ರರು ಇದರ ಸದಸ್ಯರು ಉಪಸ್ಥಿತರಿದ್ದರು.

ತೀರ್ಥಾನಂದ ಕೊಡಂಕಿರಿ ಕಾರ್ಯಕ್ರಮನ್ನು ನಿರೂಪಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading