Ad Widget

ಸುಬ್ರಹ್ಮಣ್ಯ : ಫೆ.08ರಂದು “ತಾಲೂಕು ಭಜನೋತ್ಸವ – 2026” ; ಆಯ್ದ ಭಜನಾ ತಂಡಗಳಿಂದ ‘ಭಜನಾ ಸಂಕೀರ್ತನೆ’ ಹಾಗೂ ಭಜನಾ ಮಂಡಳಿಗಳಿಂದ ‘ಕುಣಿತ ಭಜನೆ’ ; ಸಮಾರೋಪ ಸಮಾರಂಭದಲ್ಲಿ 1 ಸಾವಿರಕ್ಕೂ ಅಧಿಕ ಭಜಕರಿಂದ ಏಕಕಾಲದಲ್ಲಿ ‘ಕುಣಿತ ಭಜನಾ ಪ್ರದರ್ಶನ’

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು, ತಾಲೂಕು ಭಜನೋತ್ಸವ-2026ರ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಭಜಕರ ಸಹಯೋಗದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭಜನೆಯ ಸಂಸ್ಕಾರವನ್ನು ಉಳಿಸಿ ಬೆಳೆಸುವ ಸಲುವಾಗಿ ಫೆ.08ನೇ ಆದಿತ್ಯವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿ ಸಭಾಂಗಣದಲ್ಲಿ “ತಾಲೂಕು ಭಜನೋತ್ಸವ-2026” ನೆರವೇರಲಿದ್ದು, ಪೂರ್ವಾಹ್ನ 8:30ರಿಂದ ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಸಾನಿಧ್ಯದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸನ್ನಿಧಿಗೆ ಚೆಂಡೆ, ವಾದ್ಯಘೋಷ ಮತ್ತು ವಿವಿಧ ಧಾರ್ಮಿಕ ವೇಷ-ಭೂಷಣಗಳೊಂದಿಗೆ ಹಾಗೂ ಭಜಕರ ಸಂಭ್ರಮದ ಕುಣಿತ ಭಜನಾ ಮೆರವಣಿಗೆ ನಡೆಯಲಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ರವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ನಂತರ ಪೂರ್ವಾಹ್ನ 10:30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿ ಸಭಾಂಗಣದಲ್ಲಿ “ತಾಲೂಕು ಭಜನೋತ್ಸವ-2026” ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ದೀಪ ಪ್ರಜ್ವಲನೆ ಹಾಗೂ ಆಶೀರ್ವಚನ ನೀಡಲಿದ್ದಾರೆ.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು 2026ರ ಸುಳ್ಯ ತಾಲೂಕು ಭಜನೋತ್ಸವ ಸಮಿತಿ ಸುಬ್ರಹ್ಮಣ್ಯ ವಲಯದ ಅಧ್ಯಕ್ಷರಾದ ಡಾ. ರವಿ ಕಕ್ಕೆಪದವು ಇವರು ವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಉಡುಪಿ ಕರಾವಳಿ ಪ್ರಾದೇಶಿಕ ಕಛೇರಿಯ ನಿರ್ದೇಶಕರಾದ ಆನಂದ ಸುವರ್ಣ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಇದರ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಕಲ್ಲಾಜೆ, 2025ರ ಸಂಪಾಜೆ ವಲಯ ತಾಲೂಕು ಭಜನೋತ್ಸವ ಸಮಿತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಇದರ ಸುಳ್ಯ ತಾಲೂಕು ಅಧ್ಯಕ್ಷರಾದ ಲೋಕನಾಥ್ ಅಮೆಚೂರು, 2026ರ ತಾಲೂಕು ಭಜನೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಗೌರವ ಸಲಹೆಗಾರರಾದ ಶ್ರೀಮತಿ ವಿಮಲಾ ರಂಗಯ್ಯ, ಉದ್ಯಮಿಗಳಾದ ಯಜ್ಞೇಶ್ ಆಚಾರ್ಯ ಸುಬ್ರಹ್ಮಣ್ಯ, ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಗಣೇಶ್ ನಾಯರ್, ಐನೆಕಿದು-ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್.ಎಲ್ ವೆಂಕಟೇಶ್ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು ಇದರ ಅಧ್ಯಕ್ಷರಾದ ಸೋಮಶೇಖರ್ ಪೈಕ ಇವರುಗಳು ಉಪಸ್ಥಿತರಿರಲಿದ್ದಾರೆ.
ಮದ್ಯಾಹ್ನ 12:30ರಿಂದ 2:00 ಗಂಟೆಯವರೆಗೆ ಆಯ್ದ ಭಜನಾ ತಂಡಗಳಿಂದ ‘ಭಜನಾ ಸಂಕೀರ್ತನೆ’ ನಡೆಯಲಿದ್ದು, ಮದ್ಯಾಹ್ನ 2:00 ಗಂಟೆಯಿಂದ 4:00 ಗಂಟೆಯವರೆಗೆ ಭಾಗವಹಿಸಿದ ಎಲ್ಲಾ ಭಜನಾ ಮಂಡಳಿಗಳ ಭಜಕರಿಂದ ‘ಕುಣಿತ ಭಜನೆ’ ನಡೆಯಲಿದೆ.
ನಂತರ ಸಂಜೆ 4:00 ಗಂಟೆಯಿಂದ ಭಜನೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, 2026ರ ಸುಳ್ಯ ತಾಲೂಕು ಭಜನೋತ್ಸವ ಸಮಿತಿಯ ಸುಬ್ರಹ್ಮಣ್ಯ ವಲಯದ ಗೌರವ ಅಧ್ಯಕ್ಷರಾದ ಗಿರಿಧರ ಸ್ಕಂದ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ವಲಯದ ಉತ್ತಮ ಭಜನಾ ಮಂಡಳಿ ಮತ್ತು ಹಿರಿಯ ಭಜಕರಿಗೆ ಗೌರವಾರ್ಪಣೆ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಭಜನಾ ಕಮ್ಮಟ ತರಬೇತಿಯಲ್ಲಿ ಭಾಗವಹಿಸಿದ ಸದಸ್ಯರನ್ನು ಗುರುತಿಸುವುದು ಹಾಗೂ ಸುಮಾರು 75ಕ್ಕೂ ಹೆಚ್ಚು ಭಜನಾ ಮಂಡಳಿಗಳ 1,000ಕ್ಕಿಂತ ಅಧಿಕ ಭಜಕರಿಂದ ಏಕಕಾಲದಲ್ಲಿ ‘ಕುಣಿತ ಭಜನಾ ಪ್ರದರ್ಶನ’ ನಡೆಯಲಿದೆ.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ದಕ್ಷಿಣ ಕನ್ನಡ ಜಿಲ್ಲೆ 2 ಇದರ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಡಿ, ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ದಿವಾನರಾದ ಸುದರ್ಶನ್ ಜೋಯಿಸ್, ಸುಳ್ಯ ತಾಲೂಕು ಪ್ರಗತಿಬಂಧು ಸ್ವ-ಸಹಾಯ ಸಂಘ ಕೇಂದ್ರ ಸಮಿತಿ ಒಕ್ಕೂಟದ ಸುಳ್ಯ ತಾಲೂಕು ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ಮಾಜಿ ರಾಜ್ಯಾಧ್ಯಕ್ಷರಾದ ಬಾಲಕೃಷ್ಣ ಪುತ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು ಗೌರವಾಧ್ಯಕ್ಷರಾದ ಯತೀಶ್ ರೈ ದುಗ್ಗಲಡ್ಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಬ್ರಹ್ಮಣ್ಯ ವಲಯದ ಅಧ್ಯಕ್ಷರಾದ ಮಾಧವ ಚಾಂತಾಳ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯದ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು ಕಾರ್ಯದರ್ಶಿಗಳಾದ ಸತೀಶ್.ಟಿ.ಎನ್ ಹಾಗೂ ವಲಯ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಚಂದ್ರಶೇಖರ ಕೊಂದಾಳ ಇವರುಗಳು ಉಪಸ್ಥಿತರಿರಲಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading