Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಜಾತ್ರೋತ್ಸವ ಸಂಭ್ರಮ ; ಶ್ರೀ ದೇವರ ದರ್ಶನ ಬಲಿ ಬಟ್ಟಲುಕಾಣಿಕೆ ; ನಾಳೆ ರಾತ್ರಿ ದೇವರ ಬ್ರಹ್ಮರಥೋತ್ಸವ – ಕಾಚುಕುಜುಂಬ ದೈವದ ನರ್ತನ ಸೇವೆ

ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ  ಸಂಭ್ರಮದೊಂದಿಗೆ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ದೇವರ ಉತ್ಸವ, ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಮಹಾಪೂಜೆ ಜರುಗಿತು.

ನಾಳೆ ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಹಾಗೂ  ಕಾಚುಕುಜುಂಬ ದೈವದ ನರ್ತನ ಸೇವೆ, ಶ್ರೀ ದೇವರ ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ ಜರುಗಲಿದೆ.

ಫೆ.01ರಂದು ಪೂರ್ವಾಹ್ನ ಶ್ರೀ ರುದ್ರಹವನ, ವೇದ ಪಾರಾಯಣ, ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ ಶ್ರೀ ದೇವಾಲಯಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ,  ಧ್ವಜಾರೋಹಣ, ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.

ಫೆ.02ರಂದು ಬೆಳಿಗ್ಗೆ ನಾಗತೀರ್ಥ ಮೂಲಸ್ಥಾನವಾದ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತಂದು, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ನಿತ್ಯಬಲಿ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಿತು. ಸಂಜೆ ಶ್ರೀ ರಕ್ತೇಶ್ವರಿ ದೈವದ ಸನ್ನಿಧಿಯಲ್ಲಿ ತಂಬಿಲ ಸೇವೆ ನಡೆದು, ಶ್ರೀ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ಶ್ರೀ ದೇಗುಲದಲ್ಲಿ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ನಡೆದ ಬಳಿಕ ಶ್ರೀ ರಕ್ತೇಶ್ವರಿ ದೈವದ ನೇಮೋತ್ಸವ, ಪ್ರಸಾದ ವಿತರಣೆ ನಡೆಯಿತು.

ಫೆ.03ರಂದು ಬೆಳಿಗ್ಗೆ ಹಾಗೂ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ನಿತ್ಯಬಲಿ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಿತು. ಸಂಜೆ ವಿವಿಧ ಊರುಗಳಿಂದ ಸಂಗ್ರಹಣೆ ಮಾಡಿದ ಹಸಿರು ಕಾಣಿಕೆಯನ್ನು ಪುತ್ಯ ಸತ್ಯಕಟ್ಟೆಯಿಂದ ದೇವಳಕ್ಕೆ ತಂದು ಉಗ್ರಾಣ ತುಂಬಿಸಲಾಯಿತು. ರಾತ್ರಿ ಶ್ರೀ ದೇವರಿಗೆ ಮಹಾಪೂಜೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆದ ಬಳಿಕ ದಂಡಮಾಲೆ ಹಾಕಿ ಶ್ರೀ ದೇವರ ಬಲಿ ಹೊರಡಲಾಯಿತು.

ಫೆ.04ರಂದು ಬೆಳಿಗ್ಗೆ ಶ್ರೀ ದೇವರಿಗೆ ಮಹಾಪೂಜೆ, ಶ್ರೀ ದೇವರ ಉತ್ಸವ, ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.ರಾತ್ರಿ ಶ್ರೀ ದೇವರಿಗೆ ಮಹಾಪೂಜೆ, ಶ್ರೀ ದೇವರ ಉತ್ಸವ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ  ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶೀಮತಿ ಮಾಲಿನಿ ಕುದ್ವ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಉದಯಕುಮಾರ್ ಬೆಟ್ಟ, ಪರಮೇಶ್ವರ ಗೌಡ ಬಿಳಿಮಲೆ, ಉಮೇಶ್ ಬುಡೆಂಗಿ ಬಳ್ಪ, ಶ್ರೀ ದೇವಸ್ಥಾ‌ನದ ಅರ್ಚಕರು, ಸಿಬ್ಬಂದಿಗಳು, ಸಂಚಾಲಕರು, ಸರ್ವಸದಸ್ಯರು ಸೇರಿದಂತೆ ಪಂಜ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading