Ad Widget

ಜೇಸಿಐ ಸುಳ್ಯ ಪಯಸ್ವಿನಿ  ವತಿಯಿಂದ “ಸ್ವಚ್ಛ ಶಾಲೆ ನಾಳೆಯ ನಾಯಕತ್ವದ ನೆಲೆ” ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಪಿ.ಎಂ.ಶ್ರೀ ಸರಕಾರಿ ಪ್ರಾಥಮಿಕ ಶಾಲೆ, ಸುಳ್ಯ ಹಾಗೂ ಶಾಲಾ ಎಸ್.ಡಿ.ಎಂ.ಸಿ ಇವರ ಸಹಕಾರದೊಂದಿಗೆ “ಸ್ವಚ್ಛ ಶಾಲೆ ನಾಳೆಯ ನಾಯಕತ್ವದ ನೆಲೆ” ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾ ಚಂದ್ರಶೇಖರ ಪಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿರಾಜ್.ಎ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುನಂದಾ ಶೆಟ್ಟಿ, ಜೇಸಿಐ ಸುಳ್ಯ ಪಯಸ್ವಿನಿಯ ನಿಕಟಪೂರ್ವಾಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್ ಸುರೇಶ್ ಕಾಮತ್, ಕೋಶಾಧಿಕಾರಿ ಜೇಸಿ ಪ್ರಸನ್ನ ಎಂ.ಆರ್, ಪೂರ್ವಾಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್ ಗುರುಪ್ರಸಾದ್ ನಾಯಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು, ಶಾಲಾ ಎಸ್.ಡಿ.ಎಂ.ಎಸಿಯ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಜೇಸಿಐ ಸುಳ್ಯ ಪಯಸ್ವಿನಿ ಸದಸ್ಯರಿಂದ, ಶಾಲಾ ಎಸ್.ಡಿ.ಎಂ.ಸಿ ಪದಾಧಿಕಾರಿಗಳಿಂದ ಹಾಗೂ ಶಾಲಾ ದೈಹಿಕ ಶಿಕ್ಷಕರಿಂದ ಶಾಲಾ ಸುತ್ತಲೂ ಸ್ವಚ್ಛತಾ ಕಾರ್ಯ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading