Ad Widget

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ   ಪ್ರಾಂಶುಪಾಲರ ನೂತನ ಕೊಠಡಿ ಮತ್ತು ಕಚೇರಿ  ಉದ್ಘಾಟನೆ

ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ನೂತನ ವಿಸ್ತೃತ ಕಟ್ಟಡದಲ್ಲಿ ಪ್ರಾಂಶುಪಾಲರ ಕೊಠಡಿ ಮತ್ತು ಕಚೇರಿಯನ್ನು ಉದ್ಘಾಟಿಸಲಾಯಿತು. ಪುರೋಹಿತ್ ಶ್ರೀ ನಾಗರಾಜ ಭಟ್ಟರವರು ಗಣ ಹೋಮವನ್ನು ನೆರವೇರಿಸಿದರು.
ನೂತನ ಕೊಠಡಿಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಉದ್ಘಾಟಿಸಿ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ಸರ್ವರನ್ನು ಸ್ವಾಗತಿಸಿದರು.
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್, ಖಜಾಂಚಿ ಎಂ. ಮಾಧವ ಗೌಡ ಹಾಗೂ ನಿರ್ದೇಶಕರುಗಳಾದ ರಾಮಕೃಷ್ಣ ಯು.ಪಿ, ಜಯರಾಮ ಚಿಲ್ತಡ್ಕ, ಉಮೇಶ್ ಮಳುವೇಲು ರವರು ಉಪಸಿತರಿದ್ದರು.

ಪ್ರಾಂಶುಪಾಲರಾದ ಶ್ರೀಮತಿ ದಯಮಾಣಿ.ಕೆ ರವರು ವಂದಿಸಿದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ.ಪಿ ಹಾಗೂ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading