Ad Widget

ಮಹಿಳೆಯರ ಸುರಕ್ಷತೆಗೆ ಮತ್ತು ರಕ್ಷಣೆಗಾಗಿ ಕಾನೂನಿನ ಅರಿವು ಅಗತ್ಯ : ಕೃಷ್ಣ ಪ್ರಸಾದ್ ನಡ್ಸಾರ್

ಬೆಳ್ಳಾರೆ ಜ್ಞಾನದೀಪದಲ್ಲಿ ಮಹಿಳಾ ಕಾನೂನು ಮಾಹಿತಿ ಕಾರ್ಯಾಗಾರ

. . . . . . . . .

ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯವನ್ನು ತಪ್ಪಿಸಿ ತಮ್ಮ ರಕ್ಷಣೆ ಹಾಗೂ ಸುರಕ್ಷಾತೆಗಾಗಿ ಕಾನೂನಿನ ಅರಿವು ಪಡೆದುಕೊಳ್ಳುವುದು ಅಗತ್ಯ ಎಂದು ಪುತ್ತೂರಿನ ನ್ಯಾಯವಾದಿ ಕೃಷ್ಣಪ್ರಸಾದ್ ನಡ್ಸಾರ್ ಹೇಳಿದರು.
ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಎಜ್ಯುಕೇಶನ್ ಟ್ರಸ್ಟ್ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಇವುಗಳ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದಲ್ಲಿ ನಡೆದ ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರಗಳು ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ವಿಶ್ವನಾಥ ಕೆ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರ ರಕ್ಷಣೆಗೆ ಹಲವಾರು ಕಾನೂನುಗಳಿದ್ದು ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಹೆಚ್ಚು ಹೆಚ್ಚು ಆಗಬೇಕಿದೆ ಎಂದರು.
ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ, ಸ್ವಾಗತಿಸಿದರು. ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿ ಚಿತ್ರಾ ಪಿ ಕಾರ್ಯಕ್ರಮ ನಿರ್ವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading