ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಆಶ್ಲೇಷ ಬಲಿ ಹಾಗೂ ತುಲಾಭಾರ ಸೇವೆ

ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ ದೇವರ ಮುಂಭಾಗದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಬಳಿಕ ದೇವಳದ ಅರ್ಚಕರಾದ ರಮೇಶ್ ನೂರಿತ್ತಾಯರು ಮಾಜಿ ಪ್ರಧಾನಿಗಳಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ನಂತರ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ಪ್ರಸಾದ ಬೋಜನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್ ಇಂಜಾಡಿ, ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಎಸ್.ಜೆ.ವೈ.ರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ದೇವಳದ ಅಧೀಕ್ಷಕರಾದ ಕೆ.ಎಂ.ಗೋಪಿನಾಥ್, ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್, ಶಿಷ್ಟಾಚಾರ ವಿಭಾಗದ ಶ್ರೀಮಂತ ಜೋಳದಪ್ಪಗೆ, ನೇಮಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ, ರಾಜ್ಯವಕ್ತಾರರಾದ ಎಂ.ಬಿ. ಸದಾಶಿವ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ, ಪ್ರಮುಖರಾದ ದಯಾಕರ ಆಳ್ವ, ಸಂತೋಷ್ ಜಾಕೆ, ಸಯ್ಯದ್ ಮೀರಾ ಸಾಹೇಬ್, ಕೇನ್ಯ ರವೀಂದ್ರನಾಥ ಶೆಟ್ಟಿ, ಶಶಿರಾಜ್ ಶೆಟ್ಟಿ ಮಂಗಳೂರು, ವೈದ್ಯಾಧಿಕಾರಿಗಳಾದ ಮಂಜುನಾಥ್, ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading