Ad Widget

ಸುಳ್ಯ : ಮಾ.08 ರಂದು “ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ” – ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗ

ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ “ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ” ಮಾ.08 ರಂದು ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಲೋಕೇಶ್ ಪೆರ್ಲಪಾಡಿ ತಿಳಿಸಿದ್ದಾರೆ.

. . . . . . . . .

“ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ಶ್ರವಣದ ಸಮಸ್ಯೆಯಿಂದ(ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆಯವರು ಶ್ರವಣದ ಯಂತ್ರಕ್ಕೆ(Hearing Machine) ಅಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಿದ್ದಾರೆ. ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕಾಗಿ” ಅವರು ವಿನಂತಿಸಿದ್ದಾರೆ.

. . . . . . .

ನೋಂದಣಿ ಕಡ್ಡಾಯ : ಹಿರಿಯರಿಗೆ ಮೊದಲ ಆದ್ಯತೆ – “ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದರೆ ಜೊತೆಯಲ್ಲಿ ತರಬೇಕು. ಮೊದಲು ನೋಂದಾಯಿಸುವ 30 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಶ್ವರ್ ಮಲ್ಪೆ ಟೀಮ್‌ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 8951804399 ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು” ಎಂದು ಅವರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading