Ad Widget

ಅಡ್ಕಾರು ಅಂಜನಾದ್ರಿ ಪ್ರಸನ್ನಾಂಜನೇಯ ಕ್ಷೇತ್ರದಲ್ಲಿ ಜಾತ್ರೋತ್ಸವ ಸಡಗರ ; ದೇವರ ಬಲಿ – ದರ್ಶನ ಬಲಿ – ದೈವ -ದೇವರ ಭೇಟಿ ; ಗುಳಿಗರಾಜ ದೈವದ ಕೋಲ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ – ದರ್ಶನಬಲಿ, ದೈವ – ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧ ಪ್ರಸಾದವು ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಮಾ.6ರಂದು ರಾತ್ರಿ ನಡೆಯಿತು.

. . . . . . . . .

ರಾತ್ರಿ ಗುಳಿಗ ದೈವದ ಭಂಡಾರ ತೆಗೆದು ಶ್ರೀ ಗುಳಿಗರಾಜ ದೈವದ ಕೋಲ ನಡೆಯಿತು. ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ರಂಗಪೂಜೆ ನಡೆದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ಕಟ್ಟೆಪೂಜೆ, ದರ್ಶನಬಲಿ, ದೈವ -ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧ ಪ್ರಸಾದ ನಡೆಯಿತು.

. . . . . . .

ಈ ಸಂದರ್ಭದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಗೌರವಾಧ್ಯಕ್ಷ ಆರ್.ಕೆ. ನಾಯರ್, ಅಧ್ಯಕ್ಷ ಶಿವರಾಮ ರೈ ಕುರಿಯ, ಉಪಾಧ್ಯಕ್ಷ ನಾಗೇಶ ಅಡ್ಕಾರು, ಕೋಶಾಧಿಕಾರಿ ಜಯಂತ ಗೌಡ ಅಡ್ಕಾರು, ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಮಣಿಯಾಣಿ ಅಡ್ಕಾರುಪದವು, ಜತೆ ಕಾರ್ಯದರ್ಶಿ ಸುನಿಲ್ ಅಡ್ಕಾರು, ಸಂಚಾಲಕ ರವಿಪ್ರಸಾದ್ ಕಜೆಗದ್ದೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ವಿವೇಕ್ ರೈ ಡಿಂಬ್ರಿಗುತ್ತು, ಕಾರ್ಯದರ್ಶಿ ನವಿನ್ ಕುಮಾರ್ ಅಂಬಾಡಿಮೂಲೆ, ಜತೆ ಕಾರ್ಯದರ್ಶಿ ಶಿವಪ್ರಸಾದ್ ಅಡ್ಕಾರು ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಬ್ರಹ್ಮರಥೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading