Ad Widget

ಮಡಪ್ಪಾಡಿ : “ಅರೆಭಾಷೆ ಗ್ರಾಮೋತ್ಸವ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವುಗಳ ಸಹಕಾರದೊಂದಿಗೆ “ಅರೆಭಾಷೆ ಗ್ರಾಮೋತ್ಸವ – 2026” ಕಾರ್ಯಕ್ರಮಕ್ಕೆ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ಮಾ.08 ರಂದು ಚಾಲನೆ ನೀಡಲಾಯಿತು.
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಬಳ್ಳಡ್ಕ ಮೆರವಣಿಗೆಗೆ ಚಾಲನೆ ನೀಡಿದರು.‌ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ ಜಯರಾಮ್ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಭರತ್ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ್ ಮುಳುಗಾಡು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್ ಗಂಗಾಧರ ಹಾಗೂ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸದಾನಂದ ಬಲ್ಕಜೆ, ಸ್ವಾಗತ ಸ‌ಮಿತಿ ಅಧ್ಯಕ್ಷ ಗಂಗಯ್ಯ ಪೂಂಬಾಡಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಕಾರ್ಯಕ್ರಮದ ಸಂಚಾಲಕಿ ಲತಾ ಎಸ್ ಕುದ್ಪಾಜೆ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಗೋಪಾಲಕೃಷ್ಣ ಪಾರೆಮಜಲು ಉಪಸ್ಥಿತರಿದ್ದರು.‌ ಕೇಪಣ್ಣ ಅಂಬೆಕಲ್ಲು ಪ್ರಾತ್ಯಕ್ಷಿಕೆಗಳಿಗೆ ಚಾಲನೆ ನೀಡಿದರು.
ಸೋಮಶೇಖರ ಕೇವಳ ಸ್ವಾಗತಿಸಿ, ಜಯರಾಮ ಹಾಡಿಕಲ್ಲು ವಂದಿಸಿದರು. ದಿನೇಶ್ ಮಡಪ್ಪಾಡಿ ಹಾಗೂ ಉದಯ ಭಾಸ್ಕರ್ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading