Ad Widget

ಹರಿಹರ ಪಳ್ಳತ್ತಡ್ಕ : ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾ.21ರಂದು “ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ” ಮತ್ತು “ರಕ್ತದಾನ ಶಿಬಿರ”

ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ – ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ ಬೆಂಗಳೂರು ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಜೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಮಾ.21 ಶನಿವಾರದಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ “ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ” ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ “ರಕ್ತದಾನ ಶಿಬಿರ” ನಡೆಯಲಿದ್ದು, ಹರಿಹರ ಪಳ್ಳತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ಶಿಬಿರವನ್ನು ಉದ್ಘಾಟಿಸಲಿದ್ದು, ಹರಿಹರ ಪಳ್ಳತ್ತಡ್ಕ – ಸುಬ್ರಹ್ಮಣ್ಯ ವಿವೇಕ ಜಾಗೃತ ಬಳಗದ ಹಿರಿಯ ಕಾರ್ಯಕರ್ತರಾದ ಡಾ| ಚಂದ್ರಶೇಖರ ಕಿರಿಭಾಗ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆಯನ್ನು ಈ ಶಿಬಿರದಲ್ಲಿ ಆರೋಗ್ಯ ಇಲಾಖೆಯವರು ನಡೆಸಿಕೊಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ 9740901259, 8431342685, 8762128949 ಸಂಪರ್ಕಿಸಬಹುದಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading