ಕೊಲ್ಲಮೊಗ್ರು : ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿಯ ಬೊಳಿಯಾನ ಮನೆಯ ಮಹಿಳೆಯೋರ್ವರ ಮೈಮೇಲೆ ಬೆಂಕಿ ತಗಲಿ ಗಾಯಗೊಂಡಿದ್ದು, 10 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಬೊಳಿಯಾನ ಮನೆ ದಿ.ಚಿನ್ನಪ್ಪ ಗೌಡ ಅವರ ಪತ್ನಿ ತಿಲಕ ಮಾ.10ರಂದು ಅಡುಗೆ ಮನೆಯಲ್ಲಿ ಬೆಳಿಗ್ಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹಿಡಿದು ತಿಲಕರವರ ಮೈಮೇಲೆ ಬೆಂಕಿ ಹಿಡಿದು ಗಂಭೀರವಾಗಿ ಸುಟ್ಟ ಗಾಯಗೊಂಡ ಅವರನ್ನು ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ತರಲಾಗಿತ್ತು. ಅಲ್ಲಿ ಅವರು ಮಾ.20ರಂದು ಮೃತಪಟ್ಟರೆಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading