ಮಾವಿನಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯ

ಮಾ.19 ಗುರುವಾರದಂದು ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಜಾತ್ರಾ ಮಹೋತ್ಸವ ಮುಗಿದ ನಂತರ ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ದೈವಸ್ಥಾನದ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಸಲಾಯಿತು
ಸುಮಾರು 30 ಜನ ಸದಸ್ಯರು ಭಾಗವಹಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಹೆಕ್ಕಿ ದೈವಸ್ಥಾನದ ಸುತ್ತಮುತ್ತ ಗುಡಿಸಿ ಸೃಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಪ್ರಮುಖರಾದ ರಾಧಾಕೃಷ್ಣ ಮಾವಿನಕಟ್ಟೆ, ಭಾಸ್ಕರ ಗೌಡ ಬಾಳೆತೋಟ ಹಾಗೂ ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್ ತಳೂರು ಸೇವಾ ಪ್ರತಿನಿಧಿಯಾದ ಶ್ರೀಮತಿ ಉಷಾಲತಾ ಪಡ್ಪು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading