ಉಬರಡ್ಕ : ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ – ಸನ್ಮಾನ

ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆಯು ಮಾ.22 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾವಿತ್ರಿ ಕಣೆಮರಡ್ಕ ಮಹಿಳಾ ಹಕ್ಕುಗಳು ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಪ್ರೇಮಕಲಾ ಸುಳ್ಯಕೋಡಿ, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ವನಿತಾ ಮೂರ್ಜೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇವತಿ ರಾಮಚಂದ್ರ ಮಡಿಯಾರು, ಉಬರಡ್ಕ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಜಾತ ಭಾಸ್ಕರ ರಾವ್‌, ನಂದಿನಿ ಮಹಿಳಾ ಮಂಡಲದ ಸ್ಥಾಪಕ ಸಂಚಾಲಕಿ ಶ್ರೀಮತಿ ಶಾರದಾ ಡಿ.ಶೆಟ್ಟಿ, ಹಿರಿಯ ನಿವೃತ್ತ ಅಧ್ಯಾಪಕಿ ಶ್ರೀಮತಿ ಜಾನಕಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading