ಬೆಳ್ಳಾರೆ : ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿಗೆ ತೆರಳುವ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ನಾಗೇಶ್ ಕುಲಾಲ್, ಹಿದಾಯ ಪಬ್ಲಿಕ್ ಸ್ಕೂಲ್ ಶಿಕ್ಷಕಿ ಸಫ್ರೀನಾ ವೇದಿಕೆಯಲ್ಲಿ ಉಪಸ್ಥಿರಿದ್ದರು. ಸುಳ್ಯ ತಾಲೂಕು ಮಹಿಳಾ ಮಂಡಲದ ವತಿಯಿಂದ ಅತ್ಯುತ್ತಮ ಅಂಗನವಾಡಿ ಸಹಾಯಕಿ ಸನ್ಮಾನ ಸ್ವೀಕರಿಸಿದ ಗುಲಾಬಿ ಅವರನ್ನು ಅಭಿನಂದಿಸಲಾಯಿತು. ಎಲ್.ಕೆ.ಜಿ ಹಾಗೂ ಯು.ಕೆ.ಜಿಗೆ ತೆರಳುವ ಎಲ್ಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading