ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಉಭಯ ತಾಲೂಕುಗಳ ಹಲವು ಕಡೆಗಳಲ್ಲಿ ಇಂದು(ಮಾ.31) ಸಂಜೆಯ ವೇಳೆಗೆ ಗಂಟೆಗಳ ಕಾಲ ಗುಡುಗು-ಸಿಡಿಲು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಕುಕ್ಕೆ ಸುಬ್ರಹ್ಮಣ್ಯ ಪರಿಸರದ ರಸ್ತೆಗಳಲ್ಲಿ ನೀರು ತುಂಬಿದ್ದು, ಇಲ್ಲಿನ ಇಂಜಾಡಿ ರಸ್ತೆಯ ಕನ್ನಡಿ ಹೊಳೆಯ ಸೇತುವೆ ಮೇಲೆ ನೀರು ತುಂಬಿ ಕೆಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading