ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು

ಸುಬ್ರಹ್ಮಣ್ಯ ಏಪ್ರಿಲ್ 3: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿಯವರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಭಕ್ತರ ಸುಗಮ ದರ್ಶನ, ವಿವಿಧ ಸೇವೆ, ಹಾಗೂ ವಾಹನಗಳ ಪಾರ್ಕಿಂಗ್ ಪ್ರದೇಶಗಳಲ್ಲಿ ಸುಗಮ ವ್ಯವಸ್ಥೆಗಳಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಮಧ್ಯಾಹ್ನದ ಸಮಯದಲ್ಲಿ ಶ್ರೀ ದೇವಳದ ಹೊರಾಂಗಣದಲ್ಲಿ ಬೇರೆ ಬೇರೆ ಸೇವೆಗಳನ್ನು ನಡೆಸುವ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದರು. ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು ಕುಳಿತಿದ್ದರು. ಮುಂದಿನ ದಿನಗಳಲ್ಲಿ ರಜಾ ಸಮಯವಿರುವುದರಿಂದ ಅಧಿಕ ಸಂಖ್ಯೆಯ ಪ್ರವಾಸಿಗರು ಹಾಗೂ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳುವುದು ಒಳ್ಳೆಯದೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading