ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ದಯಾನಂದ ಕಲ್ನಾರ್ ಅವರಿಗೆ ಬೀಳ್ಕೊಡುಗೆ

ಉದಯವಾಣಿ ಪತ್ರಿಕೆಯ ಸುಳ್ಯ ತಾಲೂಕು ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಕಲ್ನಾರ್ ಅವರು ಮಂಗಳೂರಿನಲ್ಲಿ ಪತ್ರಿಕೆಯೊಂದರ ವರದಿಗಾರರಾಗಿ ನೇಮಕಗೊಂಡು ತೆರಳುತ್ತಿರುವ ಹಿನ್ನೆಲೆಯಲ್ಲಿ ಏ.08 ರಂದು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ದಯಾನಂದ ಕಲ್ನಾರ್ ಅವರನ್ನು ಬೀಳ್ಕೊಡಲಾಯಿತು.
ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಶಿವರಾಮ ಕಜೆಮೂಲೆ, ಕೋಶಾಧಿಕಾರಿ ಲೋಕೇಶ್ ಬಳ್ಳಡ್ಕ, ಸ್ಥಾಪಕಾಧ್ಯಕ್ಷರಾದ ವಿಶ್ವನಾಥ ನಡುತೋಟ, ಉಪಾಧ್ಯಕ್ಷರಾದ ಪ್ರಕಾಶ್ ಸುಬ್ರಹ್ಮಣ್ಯ ಹಾಗೂ ನಿರ್ದೇಶಕರಾದ ಶಿವ ಭಟ್ ಕಾಂಚನ, ನಾಗೇಶ್ ಬಳ್ಪ, ಗಣೇಶ್ ಅನಿಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading