ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದ ಗುತ್ತಿಗಾರು ಸರ್ಕಾರಿ ಪದವಿ ಪೂರ್ವ ಕಾಲೇಜು ; ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ 15 ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಗುತ್ತಿಗಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸಮೀಕ್ಷಾ.ಎಂ.ವಿ 569, ತೃಷಾ.ಡಿ.ಎಸ್ 569, ನವ್ಯಶ್ರೀ 558, ಪ್ರೀತಿಕಾ.ಎಂ 555, ಅಶ್ವಿನಿ.ಕೆ.ಆರ್ 550, ಸಚಿನ್.ಪಿ.ಆರ್ 548, ವಿಷ್ಣುಪ್ರಸಾದ್.ಎಂ 548, ವರ್ಷಾ.ಕೆ.ಬಿ 545, ಪುರುಷೋತ್ತಮ.ಎ 544, ಡೀಶಾ ಕುಮಾರಿ.ಕೆ.ವಿ 532 ಹಾಗೂ ಕಲಾ ವಿಭಾಗದಲ್ಲಿ ಹಂಸಿಕಾ ಬಿ.ಎಲ್ 562, ಪೂರ್ಣಿ 543, ದಿವ್ಯಾ 527, ಅಖಿಲಾ.ಕೆ 524, ಜನನಿ ಬಿ.ಆರ್ 521 ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading