ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.98 ಫಲಿತಾಂಶ ದಾಖಲಿಸಿದ ಸುಳ್ಯದ ರೋಟರಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.98 ಫಲಿತಾಂಶ ದಾಖಲಿಸಿದ ಸುಳ್ಯದ ರೋಟರಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ರೋಟರಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು ಶೇ.98 ಫಲಿತಾಂಶ ದಾಖಲಿಸಿದೆ. ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 127 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 67 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 68 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದ್ದು, 41 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಯಶಸ್ವಿ.ಪಿ ಭಟ್(579 ಅಂಕಗಳು) ಪ್ರಥಮ ಸ್ಥಾನ, ಕೀರ್ತಿ.ಎ(572 ಅಂಕಗಳು) ದ್ವಿತೀಯ ಸ್ಥಾನ ಹಾಗೂ ಮೋಕ್ಷಾ.ಕೆ.ಬಿ(572 ಅಂಕಗಳು) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 61 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 59 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.98 ಫಲಿತಾಂಶ ಬಂದಿದ್ದು, 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಅಶ್ಲೇಷ್(580 ಅಂಕಗಳು), ರಿಫಾ.ಟಿ.ಎ(580 ಅಂಕಗಳು), ಟಿ.ನಿದಿಯಾ ರಾಜ್ (580 ಅಂಕಗಳು) ಹಾಗೂ ಜೈನಬತ್ ಲಿಜಾ(580 ಅಂಕಗಳು) ಪ್ರಥಮ ಸ್ಥಾನ ಗಳಿಸಿದ್ದು, ಹಂಶಿತಾ.ಎನ್(572 ಅಂಕಗಳು) ದ್ವಿತೀಯ ಸ್ಥಾನ ಹಾಗೂ ಪಾತಿಮಾತ್ ಶಾಜ್ನಾ(555 ಅಂಕಗಳು) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading