ಸುಳ್ಯ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಗ್ಯಾಸ್ ಸಮಸ್ಯೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ; ಎಪ್ರಿಲ್ 27ರಂದು ಬೃಹತ್ ಪ್ರತಿಭಟನೆಗೆ ನಿರ್ಧಾರ

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಗ್ಯಾಸ್ ಸಮಸ್ಯೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಎ.17 ರಂದು ನಡೆಯಿತು. 
ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಸಭೆಯ ಅಧ್ಯಕ್ಷತೆ ವಹಿಸಿದರು. 
ದಿನಾಂಕ 27-04-2026ನೇ ಸೋಮವಾರದಂದು ಸುಳ್ಯ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ನಡೆಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫೈಜಲ್ ಕಡಬ, ದ.ಕ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯದರ್ಶಿ ಶ್ರೀ ಭವಾನಿಶಂಕರ್ ಕಲ್ಮಡ್ಕ, ದ.ಕ ಜಿಲ್ಲಾ ಕಾಂಗ್ರೆಸ್ ಸದಸ್ಯ ಶ್ರೀ ನಂದರಾಜ್ ಸಂಕೇಶ್, ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ ಜೆ, ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸುಳ್ಯ ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಅಧ್ಯಕ್ಷ ಪದ್ಮನಾಭ ಹರ್ಲಡ್ಕ,ಸುಳ್ಯ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಎನ್.ಎಸ್.ಯು.ಐ ಅಧ್ಯಕ್ಷ ಧನುಶ್ ಕುಕ್ಕೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಮಂಜುನಾಥ್ ಕಂದಡ್ಕ, ಸುಳ್ಯ ಬ್ಲಾಕ್ ಎಸ್.ಸಿ ಘಟಕದ ಮಾಜಿ ಅಧ್ಯಕ್ಷ ಆನಂದ ಬೆಳ್ಳಾರೆ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆಶಿಕ್ ಅರಂತೋಡು, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ದೊಡ್ಡಡ್ಕ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಶರವಣ ಕುಮಾರ್ ಮೇದಿನಡ್ಕ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಪ್ರೇಮಾ ಹರೀಶ್ವರನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಚಂದ್ರನ್ ಕೂಟೇಲು, ಅಮರಮುಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಪೂವಪ್ಪ ಅರ್ನೋಜಿ, ಎಸ್ ಸಿ ಘಟಕದ ಮಾಜಿ ಉಪಾಧ್ಯಕ್ಷ ಮಧುಸೂದನ್ ಬೂಡು, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮಹಮ್ಮದ್ ಜಂಶೀರ್, ಜಿಯಾದ್ ಕಡಬ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading