ಬಲ್ಕಜೆ : ಶಿಕ್ಷಕ ಬೆಳ್ಯಪ್ಪ ಗೌಡರಿಗೆ ಬೀಳ್ಕೊಡುಗೆ

ಮಡಪ್ಪಾಡಿ ಗ್ರಾಮದ ಬಲ್ಕಜೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ 26 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಇದೀಗ ವರ್ಗಾವಣೆ ಗೊಳ್ಳುತ್ತಿರುವ ಬೆಳ್ಯಪ್ಪ ಗೌಡ.ಜೆ‌ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏ.19ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಇಂದ್ರಪ್ರಸಾದ್ ಕೇವಲ ವಹಿಸಿದ್ದರು. 
ಮುಖ್ಯ ಅತಿಥಿಗಳಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು, ಗುತ್ತಿಗಾರು ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪಕ ಅಧ್ಯಕ್ಷ ಪಿ.ಸಿ ಜಯರಾಮ್, ಯುವ ನ್ಯಾಯವಾದಿ ದಿನೇಶ್ ಮಡಪ್ಪಾಡಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚೇತನ್ ಮಡಪ್ಪಾಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading