ಪೆರುವಾಜೆ : ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

ಪೆರುವಾಜೆ ಗ್ರಾಮ ಪಂಚಾಯತ್, ಗ್ರಂಥಾಲಯ ಪೆರುವಾಜೆ ಹಾಗೂ ಜೇಸಿಐ ಬೆಳ್ಳಾರೆ ಇದರ ನೇತೃತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಎ.18ರಂದು ನಡೆಯಿತು.
ಸಮಾರೋಪ‌ ಸಮಾರಂಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಫಯಾಝ್ ಅಹಮ್ಮದ್, ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ‌ ಅಧಿಕಾರಿಯಾದ ಜಯಮಾಲಾ, ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನಿಲ್ ಕುಮಾರ್ ರೈ, ಬೆಳ್ಳಾರೆ ಜೇಸಿಐ ಅಧ್ಯಕ್ಷರಾದ ಪೂರ್ಣಿಮಾ ಪೆರ್ಲಂಪಾಡಿ, ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಹನಾಝ್, ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಪದ್ಮನಾಭ ಶೆಟ್ಟಿ ಹಾಗೂ ಬೆಳ್ಳಾರೆಯ ಜೇಸಿಐ ಸದಸ್ಯರುಗಳು, ಸಂಜೀವಿನಿ ಸಂಘದ ಎಂಬಿಕೆ ದೇವಕಿ, ಪೆರುವಾಜೆ ಗ್ರಾಮ ಪಂಚಾಯತಿನ ಸಿಬ್ಬಂದಿ ವರ್ಗದವರು, ಶಿಬಿರದ ಕೇಂದ್ರ ಬಿಂದುಗಳಾದ ಮಕ್ಕಳು ಮತ್ತು ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಪ್ರಶಾಂತ್ ಅವರನ್ನು ಬೆಳ್ಳಾರೆಯ ಜೇಸಿಐ ವತಿಯಿಂದ ಸನ್ಮಾನಿಸಲಾಯಿತು. ಪಂಚಾಯತ್ ನ ಜಯಲಕ್ಷ್ಮಿ ಸ್ವಾಗತಿಸಿ, ಅಕ್ಷತಾ ನಾಗನಕಜೆ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು‌. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳಾದ ಹರಿನಾಕ್ಷಿ, ದಾಮೋದರ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading