ಏ.23 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಾಳೆ ಏ. 23 ರಂದು ಮಧ್ಯಾಹ್ನ 12.00 ಗಂಟೆಗೆ 2026ರ ಎಸ್.ಎಸ್‌.ಎಲ್.ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಿದೆ. ಫಲಿತಾಂಶವನ್ನು https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು. ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (Digilocker) ಮೂಲಕ ದಿನಾಂಕ :23-04-2026 ರಂದು ಮಧ್ಯಾಹ್ನ 12.00 . https://www.digilocker.gov.in ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading