ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ ; ನೂತನ ಸಭಾಭವನದ ಲೋಕಾರ್ಪಣೆ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಏ.19ರಂದು ಬೆಳಿಗ್ಗೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆದು ರಾತ್ರಿ ಸ್ಥಳೀಯರಿಂದ ವಿವಿಧ ಸಾಂಸ್ಕೃತಿಕ ವೈಭವ ಹಾಗೂ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದು ನಂತರ ಶ್ರೀ ವಾಸುಕಿ ಯಕ್ಷಗಾನ ಮಂಡಳಿ ಸುಬ್ರಹ್ಮಣ್ಯ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ನಡೆಯಿತು.
ಏ.20ರಂದು ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ ಹಾಗೂ ದೇವರಿಗೆ ಬೆಳಗ್ಗಿನ ಮಹಾಪೂಜೆ ನಡೆದು ಶತರುದ್ರಾಭಿಷೇಕ ಪ್ರಾರಂಭ ನಂತರ ಪರಿವಾರ ದೇವರುಗಳಿಗೆ ಕಲಶಾಭಿಷೇಕ ಹಾಗೂ ತಂಬಿಲ ಸೇವೆ ನಡೆದು ಶ್ರೀ ಬಸವೇಶ್ವರ ದೇವರಿಗೆ ಕಲಶಾಭಿಷೇಕ ಹಾಗೂ ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ದೀಪಾರಾಧನೆ, ತಾಯಂಬಕ, ಶ್ರೀ ರಂಗಪೂಜೆ ಹಾಗೂ ಮಹಾಪೂಜೆ ನಡೆದು ರಾತ್ರಿ ಶ್ರೀ ಭೂತಬಲಿ, ಪಲ್ಲಕ್ಕಿ ಉತ್ಸವ, ವಸಂತ ಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನಡೆಯುವುದರೊಂದಿಗೆ ಶ್ರೀ ಬಸವೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಈ ವರ್ಷ ಜಾತ್ರೋತ್ಸವದ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಭಾಭವನ ಲೋಕಾರ್ಪಣೆಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಾತ್ರಾ ಮಹೋತ್ಸವದಲ್ಲಿ ಆಕರ್ಷಕ ಸಿಡಿಮದ್ದಿನ ಪ್ರದರ್ಶನ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಗೌರವಾಧ್ಯಕ್ಷರಾದ ಮನೋಹರ ನಾಳ, ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಪಳ್ಳಿಗದ್ದೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಜಯನ್ ಕುಲ್ಕುಂದ, ಟ್ರಸ್ಟ್‌ನ ಕಾರ್ಯದರ್ಶಿಗಳಾದ ವಿಜಯ ಕುಮಾರ್ ನಡುತೋಟ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಭಕ್ತಾದಿಗಳು ಸಹಕರಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading