ಇಂದಿನ(ಏಪ್ರಿಲ್ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಸ್ಥಿರತೆ ಕಾಯ್ದುಕೊಂಡ ಅಡಿಕೆ-ಕಾಳುಮೆಣಸು ; ರಬ್ಬರ್ ಬೆಲೆಯಲ್ಲಿ ಭರ್ಜರಿ ಚೇತರಿಕೆ! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 23 ಏಪ್ರಿಲ್ 2026
ವಾರ : ಗುರುವಾರ
ಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.

ಅಡಿಕೆ ಧಾರಣೆ
ಹೊಸ ಅಡಿಕೆ : 290-445-473/475
ಹಳೆ ಅಡಿಕೆ : 420-450-547/550
ಡಬಲ್ ಚೋಲ್ : 420-450-547/550
ಫಟೋರ : 280-400 ರಿಂದ 405
ಉಳ್ಳಿಗಡ್ಡೆ : 165-290
ಕರಿಗೋಟು : 230-265
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)
ನಿನ್ನೆ ಏಪ್ರಿಲ್ 22ಕ್ಕೆ ಹೋಲಿಸಿದರೆ, ಇಂದು(ಏಪ್ರಿಲ್ 23) ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಹೊಸ ಅಡಿಕೆ ಮತ್ತು ಹಳೆ ಅಡಿಕೆ ದರಗಳು ಇಂದೂ ಕೂಡ ಸ್ಥಿರತೆಯನ್ನು ಕಾಯ್ದುಕೊಂಡಿವೆ. ಫಟೋರ ಮತ್ತು ಉಳ್ಳಿಗಡ್ಡೆಗಳ ಬೆಲೆಯೂ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಇತರ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ
ಕಾಳುಮೆಣಸು : 575-675
ಹಸಿ ಕೊಕ್ಕೋ : 70-100
ಒಣ ಕೊಕ್ಕೋ : 270-310
ಕೊಬ್ಬರಿ : 150-190
ಅಡಿಕೆಯಂತೆಯೇ ಇತರ ಪ್ರಮುಖ ಕೃಷಿ ಉತ್ಪನ್ನಗಳಾದ ಕಾಳುಮೆಣಸು, ಕೊಕ್ಕೋ ಮತ್ತು ಕೊಬ್ಬರಿ ಬೆಲೆಯಲ್ಲೂ ಇಂದು(ಏಪ್ರಿಲ್ 23) ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಾಳು ಮೆಣಸು ಗರಿಷ್ಠ 675 ರೂಪಾಯಿಗಳಲ್ಲಿ ವ್ಯವಹಾರ ನಡೆಸುತ್ತಿದ್ದರೆ, ಒಣ ಕೊಕ್ಕೋ ದರವು ನಿನ್ನೆ(ಏಪ್ರಿಲ್ 22)ಯಂತೆಯೇ 310 ರೂಪಾಯಿಗಳಲ್ಲಿ ಸ್ಥಿರವಾಗಿದೆ. ಕೊಬ್ಬರಿಯೂ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ರಬ್ಬರ್ ಧಾರಣೆ
ಗ್ರೇಡ್ : 233.50
ಲಾಟ್ : 204.00
ಸ್ಕ್ರ್ಯಾಪ್ ಪ್ರಥಮ ದರ್ಜೆ : 144.00
ಸ್ಕ್ರ್ಯಾಪ್ ದ್ವಿತೀಯ ದರ್ಜೆ : 135.00
ರಬ್ಬರ್ ಮಾರುಕಟ್ಟೆಯಲ್ಲಿ ಮೊನ್ನೆ ಏಪ್ರಿಲ್ 21ಕ್ಕೆ ಹೋಲಿಸಿದರೆ ಇಂದು(ಏಪ್ರಿಲ್ 23) ಉತ್ತಮ ಚೇತರಿಕೆ ಕಂಡುಬಂದಿದೆ. ಗ್ರೇಡ್ ರಬ್ಬರ್ ಬೆಲೆಯಲ್ಲಿ ಪ್ರತಿ ಕೆಜಿಗೆ 4 ರೂಪಾಯಿಗಳಷ್ಟು ಏರಿಕೆಯಾಗಿದ್ದು, 233.50 ರೂಪಾಯಿಗಳಿಗೆ ತಲುಪಿದೆ. ಅದೇ ರೀತಿ, ಲಾಟ್ ಮತ್ತು ಸ್ಕ್ರಾಪ್ ರಬ್ಬರ್ ಬೆಲೆಗಳೂ ಕೂಡ ಸರಾಸರಿ 3 ರಿಂದ 3.50 ರೂಪಾಯಿಗಳಷ್ಟು ಹೆಚ್ಚಳ ಕಂಡಿವೆ.

ಕೃಷಿಕರ ಗಮನಕ್ಕೆ : ಈ ಮೇಲಿನ ಮಾರುಕಟ್ಟೆ ಧಾರಣೆಯು ಇಂದಿನ ಮಾರುಕಟ್ಟೆ ಸ್ಥಿತಿ-ಗತಿಯನ್ನು ಆಧರಿಸಿದ್ದು, ಉತ್ಪನ್ನಗಳ ಗುಣಮಟ್ಟ, ತೇವಾಂಶ ಹಾಗೂ ಮಾರುಕಟ್ಟೆ ಅವಕಕ್ಕೆ ಅನುಗುಣವಾಗಿ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಮಂಡಿಗಳಲ್ಲಿ ದರಗಳು ಅಲ್ಪಮಟ್ಟಿಗೆ ವ್ಯತ್ಯಾಸವಿರಬಹುದು. ನಿಖರ ಮಾಹಿತಿಗಾಗಿ ಕೃಷಿಕರು ತಮ್ಮ ಸಮೀಪದ ಕ್ಯಾಂಪ್ಕೋ ಶಾಖೆ, ಮಾರುಕಟ್ಟೆ ಕೇಂದ್ರ ಅಥವಾ ಪರಿಚಿತ ವರ್ತಕರನ್ನು ಸಂಪರ್ಕಿಸಬಹುದಾಗಿದೆ.

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading