ಬೆಳ್ಳಾರೆ : ಡಾ. ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅರೆಭಾಷೆ ಐಸಿರಿ – ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಎ.21ರಂದು ಡಾ. ಅಂಬೇಡ್ಕರ್ ಸಭಾಭವನದಲ್ಲಿ “ಅರೆಭಾಷೆ ಐಸಿರಿ – ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ” ನಡೆಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಬೆಳಗಾವಿ ಐ.ಟಿ.ಯು ವಿಶ್ರಾಂತ ಪ್ರಾದೇಶಿಕ ನಿರ್ದೇಶಕರಾದ ಡಾ. ಶಿವಕುಮಾರ್ ಹೊಸೊಳಿಕೆ “ಅರೆಭಾಷೆ ಸಂಸ್ಕೃತಿಯ ಹುಟ್ಟು, ಬೆಳವಣಿಗೆ ಹಾಗೂ ಆಚಾರ-ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣವನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಾಲಸುಬ್ರಹ್ಮಣ್ಯ.ಪಿ.ಎಸ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ರಾಮಚಂದ್ರ.ಕೆ, ಅರೆಭಾಷೆ ಅಕಾಡೆಮಿಯ ಸದಸ್ಯ ಸಂಚಾಲಕರಾದ ಚಂದ್ರಶೇಖರ ಪೇರಾಲು, ಕಾರ್ಯಕ್ರಮದ ಸಂಯೋಜಕರಾದ ಮನೋಜ್, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಚಂದ್ರಾವತಿ, ಡಾ. ಎನ್.ಎ ಜ್ಞಾನೇಶ್, ಶ್ರೀಮತಿ ಲತಾ ಪ್ರಸಾದ್ ಕುದ್ಪಾಜೆ, ಉದಯವಾಣಿ ಪತ್ರಿಕೆಯ ಕಿರಣ್, ಜೀವನ್ ಪುರ ಹಾಗೂ ಅರೆಭಾಷೆ ಸಾಹಿತ್ಯ ಸಂಘದ ಅಧ್ಯಕ್ಷರಾದ ಲಿಖಿನ್, ಉಪಾಧ್ಯಕ್ಷರಾದ ಪ್ರಿಯಾಂಕ.ಬಿ.ಹೆಚ್ ಮತ್ತು ಶ್ರೇಯಾ.ಎ.ಪಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮ ನಡೆದ ಬಳಿಕ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಅರೆಭಾಷೆ ಹಾಡು(ವೈಯಕ್ತಿಕ), ಅರೆಭಾಷೆ ನೃತ್ಯ, ಅರೆಭಾಷೆ ಕಿರು ನಾಟಕ, ಆಶುಭಾಷಣ, ಅರೆಭಾಷೆ ಕವನ ರಚನೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡುವುದರ ಜೊತೆಗೆ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಸ್ಪರ್ಧೆಗಳ ಸಮಗ್ರ ಪ್ರಶಸ್ತಿಯನ್ನು ಸುಳ್ಯದ ಎನ್.ಎಂ.ಸಿ ಕಾಲೇಜು ಪಡೆದುಕೊಂಡಿತು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading