ನಿಡ್ವಾಳ : ಶ್ರೀ ಮಹಾವಿಷ್ಣು ಹಾಗೂ ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠೆ – ಪ್ರತಿಷ್ಠಾ ಪೂಜೆ ಹಾಗೂ ಶಿಖರ ಪ್ರತಿಷ್ಠೆ – ಕೋಡಿ ಮಠದ ಸ್ವಾಮೀಜಿಗಳಿಂದ ಆಶೀರ್ವಚನ

. . . . . . . . .

. . . . . . .

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ದೇವರ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಸಂಭ್ರಮದಿಂದ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ಮಹಾವಿಷ್ಣು ದೇವರು ಹಾಗೂ ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠೆ, ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆಯು ನಡೆಯಿತು.

ದೇವಸ್ಥಾನದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ,ಅಂಕುರಪೂಜೆ ನಡೆದು ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆಯು ನೆರವೇರಿತು.

ಈ ಸಂದರ್ಭದಲ್ಲಿ ಬಾಳಿಲದ ಗೀತಾ ಜ್ಞಾನ ಯಜ್ಞ ಪಾರಾಯಣ ತಂಡದಿಂದ ಶ್ರೀಮದ್ ಭಗವದ್ಗೀತಾ ಪಾರಾಯಣ ನಡೆಯಿತು ‌ ಪಂಜದ ಪಲ್ಲೋಡಿ ಶ್ರೀ ಚಾಮುಂಡೇಶ್ವರಿ ಭಜನಾ ತಂಡದವರಿಂದ ಭಜನಾ ಸಂಕೀರ್ತನೆ ನಡೆಯಿತು.

ಮಧ್ಯಾಹ್ನ ಅರಸೀಕೆರೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಆಗಮಿಸಿ, ಆಶೀರ್ವಚನ ನೀಡಿದರು.
ಮಧ್ಯಾಹ್ನ ದೇವರಿಗೆ ಪ್ರತಿಷ್ಠಾ ಬಲಿ, ಬ್ರಾಹ್ಮಣ ಆರಾಧನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಟ್ರಸ್ಟ್ ಮತ್ತು ಕೋಶಾಧಿಕಾರಿ ಚಂದ್ರಪ್ರಕಾಶ್ ಕಂಬಳ, ಪುನರ್ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ ಸೇರಿದಂತೆ ದೇವಸ್ಥಾನದ ಆಡಳಿತ ಟ್ರಸ್ಟ್ ಪದಾಧಿಕಾರಿಗಳು, ಪುನರ್ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading