ಸುಳ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ 4 ರಿಂದ 11 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರವು ನಡೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮೇ. 4 ರಂದು ನಡೆಯಿತು.
ಸದ್ರಿ ಕಾರ್ಯಕ್ರಮವನ್ನು ಶ್ರೀ ಸೋಮಶೇಖರ ಪೈಕ, ಅಧ್ಯಕ್ಷರು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ತಾಲೂಕು ರವರು ದೀಪ ಪ್ರಜ್ವಲಗೊಳಿಸಿ ಶುಭ ಹಾರೈಸಿದರು. ಶ್ರೀ ಜಯಪ್ರಕಾಶ್ ಕಲ್ಲಪ್ಪಳ್ಳಿ ನಿರ್ದೇಶಕರು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಸುಳ್ಯ ವಲಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಮಾಧವ ಗೌಡ, ಕ್ಷೇತ್ರ ಯೋಜನಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಯತೀಶ್ ರೈ ದುಗಲಡ್ಕ, ಗೌರವಧ್ಯಕ್ಷರು , ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ತಾಲೂಕು, ‍ಶ್ರೀ ಸತೀಶ್ ಟಿ.ಎನ್, ಕಾರ್ಯದರ್ಶಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಸುಳ್ಯ ತಾಲೂಕು, ಶ್ರೀ ಮನೋಹ‌ರ್ ಕೆ. ವಲಯಾಧ್ಯಕ್ಷರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ, ಉದ್ಯಮಿ ನಾರಾಯಣ ಕೇಕಡ್ಕ, ಶ್ರೀಮತಿ ಶಶಿಕಲಾ ಹರಪ್ರಸಾದ್, ಶ್ರೀಮತಿ ಭಾರತಿ ಅರಂತೋಡು, ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಭಜನಾ ಕೈಪಿಡಿಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ಶ್ರೀ ದಿನೇಶ್ ,ವಲಯ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ರವರು ಸ್ವಾಗತಿಸಿದರು, ಶ್ರೀಮತಿ ಸವಿತಾ ಸಂದೇಶ್ ಅಧ್ಯಕ್ಷರು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ವಲಯ ರವರು ವಂದಿಸಿದರು. ಶ್ರೀ ಸುರೇಶ್ ಸೇವಾಪ್ರತಿನಿಧಿ ಪರಿವಾರಕಾನ ಕಾರ್ಯಕ್ರಮ ನಿರೂಪಿಸಿದರು. ಮೇ. 11 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading