ಬೆಳ್ಳಾರೆ : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ; ಸುಳ್ಯದ ಅಗ್ನಿಶಾಮಕ ದಳದವರಿಂದ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಮೇ.04ರಿಂದ ಮೇ.11ರವರೆಗೆ ನಡೆದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಮೇ.11ರಂದು ನಡೆಯಿತು. ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿಯಾದ ಎಂ.ಎಂ.ಫಯಾಝ್ ಅಹಮ್ಮದ್ ವಹಿಸಿದ್ದರು. ಅತಿಥಿಗಳಾಗಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರ್ಷ ಜೋಗಿಬೆಟ್ಟು ವೇದಿಕೆಯಲ್ಲಿದ್ದರು. ಗೌರವ ಉಪಸ್ಥಿತರಾಗಿ ಬೆಳ್ಳಾರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರವೀಣ್ ಕುಮಾರ್ ಸಿ.ವಿ, ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲರಾದ ಉಮಾಕುಮಾರಿ, ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪ ಜಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳನ್ನು ಸಮಾರೋಪ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. ಸಮಾರೋಪ ಸಂಪನ್ಮೂಲ ವ್ಯಕ್ತಿಯಾದ ಸುಳ್ಯ ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್.ಎಸ್ ಇವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಶಿಬಿರದ ಕೊನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಮತ್ತು ಮುನ್ನೆಚ್ಚರಿಕಾ ಕ್ರಮಗಳ‌ ಬಗ್ಗೆ ಪ್ರಾತ್ಯಕ್ಷಿತೆ ನಡೆಯಿತು. ಶಿಬಿರದ ಸಮಾರೋಪದಲ್ಲಿ ಬೆಳ್ಳಾರೆ ಕೆ.ಪಿ.ಎಸ್ ವಿದ್ಯಾರ್ಥಿನಿ ಇಂಚರ.ಯನ್ ಸ್ವಾಗತಿಸಿ,ಬೆಳ್ಳಾರೆ ಗ್ರಾಮ ಪಂಚಾಯತ್ ಪಿ.ಡಿ.ಒ ಪ್ರವೀಣ್ ಕುಮಾರ್ ಸಿ.ವಿ ಧನ್ಯವಾದ ಸಮರ್ಪಿಸಿದರು. ಬೆಳ್ಳಾರೆ ಕೆ.ಪಿ.ಎಸ್ ವಿದ್ಯಾರ್ಥಿನಿ ತನುಶ್ರೀ ಕಾರ್ಯಕ್ರಮ ನಿರೂಪಿಸಿದರು. (ವರದಿ – ಎಂ.ಎ.ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading