ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ ; “ವ್ಯಕ್ತಿ ತನ್ನ ರಕ್ಷಣೆಯೊಂದಿಗೆ ಇನ್ನೊಬ್ಬನ ರಕ್ಷಣೆಗೆ ಇಳಿಯಬೇಕು” : ಡಾ. ಸಾಯಿಗೀತಾ ಜ್ಞಾನೇಶ್

ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾಲೇಜಿನ ವತಿಯಿಂದ ಬೆಳ್ಳಿ ಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ”ವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. 
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿಗೀತಾ ಜ್ಞಾನೇಶ್ ಮಾತನಾಡಿ, “ಆಕಸ್ಮಿಕ ಅವಗಡಗಳಾದಾಗ ವ್ಯಕ್ತಿ ತನ್ನ ರಕ್ಷಣೆಯೊಂದಿಗೆ ಇನ್ನೊಬ್ಬನ ರಕ್ಷಣೆಗೆ ಇಳಿಯುವ ಮೂಲಕ ಜೀವ ರಕ್ಷಣೆಯಲ್ಲಿ ತೊಡಗಬೇಕು” ಎಂದು ಹೇಳುತ್ತಾ ಬಿಸಿಗಾಳಿಯಿಂದ ರಕ್ಷಸಿಕೊಳ್ಳುವ ವಿಧಾನಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ. ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸದಸ್ಯರಾದ ಹವ್ಯಾ, ಭೂಮಿಕಾ ರೈ ಸಿ, ಧೃತಿ ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಸಿಂಚನ ಎನ್ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ, ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂಚನ ಎ.ಪಿ ವಂದಿಸಿದರು. ಕಲ್ಪಿತ.ಎಂ ಮತ್ತು ದೀಪ.ಕೆ ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್ ಕ್ರಾಸ್ ಸದಸ್ಯರು, ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಕಾಲೇಜಿನ ಬೋಧಕ – ಬೋಧಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading