ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ

ಗೌಡ ಯುವ ಸೇವಾ ಸಂಘ ವತಿಯಿಂದ ಗೌಡ ಸಮುದಾಯಭವನ ನಲ್ಲಿ ಮೇ.23 ಶನಿವಾರದಂದು ನಡೆಯಲಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದು ವೆಂಕಟರಮಣ ಸೊಸೈಟಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರ ನೇತೃತ್ವದಲ್ಲಿ ನಡೆಯಿತು. 
ಶ್ರೀ ಲಕ್ಷ್ಮೀಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ. ರೇಣುಕಾಪ್ರಸಾದ್ ಕೆ.ವಿ ಮತ್ತು ಕುಟುಂಬದವರಿಂದ ಕೊಡುಗೆಯಾಗಿ ನೀಡಲಾದ ವಧು-ವರರ ನವೀಕೃತ ಗೃಹಪ್ರವೇಶ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ ಜಯರಾಮರಿಗೆ ಸನ್ಮಾನ, 50 ವರ್ಷದ ದಾಂಪತ್ಯ ಜೀವನ ಮುನ್ನಡೆಸುತ್ತಿರುವ ದಂಪತಿಗಳಿಗೆ ಗೌರವಾರ್ಪಣೆ ಹಾಗೂ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಚರ್ಚಿಸಲಾಯಿತು. ಅರೆಭಾಷೆ ಅಕಾಡೆಮಿ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಅರೆಭಾಷೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದ ಆಯೋಜನೆ, ಅತಿಥಿ ಸ್ವಾಗತ ಹಾಗೂ ವಿವಿಧ ಸಮಿತಿಗಳ ಕರ್ತವ್ಯಗಳ ಬಗ್ಗೆ ಪದಾಧಿಕಾರಿಗಳಿಂದ ಸಲಹೆ-ಸೂಚನೆಗಳನ್ನು ಪಡೆದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಯಿತು. 
ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್ ಗಂಗಾಧರ, ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಡಬಳೆ, ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಗೌಡ ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು, ನಗರ ಅಧ್ಯಕ್ಷ ರಾಕೇಶ್ ಕುಂಟಿಕಾನ, ಗೌಡ ತರುಣಾ ಘಟಕ ಅಧ್ಯಕ್ಷ ಪ್ರೀತಮ್ ಡಿ.ಕೆ, ಕಾರ್ಯಕ್ರಮ ನಿರ್ದೇಶಕರಾದ ಜಯರಾಮ ದೇರಪ್ಪಜ್ಜನಮನೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading