ಕುಲ್ಕುಂದ ಬಸವೇಶ್ವರ ದೇವಳದ ಅಭಿವೃದ್ಧಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರಿಗೆ ಮನವಿ

ಸುಬ್ರಹ್ಮಣ್ಯ ಮೇ 18 : ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವೇಶ್ವರ ದೇವಾಲಯ ಪ್ರಗತಿ ಪಥದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಥಳೀಯ ಹಾಗೂ ಪರಊರ ಭಕ್ತ ಅಭಿಮಾನಿಗಳನ್ನು ಆಕರ್ಷಿಸುವಲ್ಲಿ ಹೆಜ್ಜೆ ಇಟ್ಟಿದೆ. ಈಗಾಗಲೇ ದೇವಾಲಯದ ಅಭಿವೃದ್ಧಿ ಕೆಲಸ ಕಾರ್ಯಗಳು ಬಹಳಷ್ಟು ಆಗಿದ್ದು, ಇನ್ನಷ್ಟು ಕೂಡ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿಗಳಾದ, ವಿಜಯಕುಮಾರ್ ನಡುತೋಟ, ಖಜಾಂಜಿ ಶಿವರಾಮ ಪಂಡಿಗದ್ದೆ ಹಾಗೂ ಉಪಾಧ್ಯಕ್ಷರಾದ ಚಂದ್ರಶೇಖರ ಬಸವನಮೂಲೆ ಮುಂತಾದವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಸುಬ್ರಹ್ಮಣ್ಯಕ್ಕೆ ಬಂದಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದರು. ಈ ಬಗ್ಗೆ ಅವರು ಸ್ಪಂದನೆ ನೀಡಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading