ಮಾಣಿಯಲ್ಲಿ ಲಾರಿ – ಸ್ಕೂಟಿ ಢಿಕ್ಕಿ – ಸವಾರ ಗಾಂಧಿನಗರ ನಿವಾಸಿ ಮೃತ್ಯು

ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ದುರ್ದೈವಿ.

. . . . . . . . .

ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading