ಸುಳ್ಯ : ಮಂಜುನಾಥ್ ಮಡ್ತಿಲ ರವರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿ ಪ್ರಧಾನ

ಎಲೆಮರೆಯ ಕಾಯಿಯಂತೆ ನಿರಂತರವಾಗಿ ತಮ್ಮನ್ನು ತಾವು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶ್ರಮಿಕ ವರ್ಗದ ಮಂಜುನಾಥ್ ಮಡ್ತಿಲ ರವರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ.23 ರಂದು ಸುಳ್ಯದ ಜೇಸಿ ಭವನದಲ್ಲಿ ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಘಟಕದ ಸಾಮಾನ್ಯ ಸಭೆಯಲ್ಲಿ ಮಂಜುನಾಥ್ ಮಡ್ತಿಲ ರವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಸಮಾರಂಭದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಸಂಯೋಜಕರಾದ ಜೇ.ಎಫ್.ಎಂ ಸುರೇಶ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಿಜಯ್ ಆಲೆಟ್ಟಿ, ಜೇಸಿಐ ಸುಳ್ಯ ಪಯಸ್ವಿನಿ ಪೂರ್ವಾಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್ ಗುರುರಾಜ್ ಅಜ್ಜಾವರ, ಜೇಸಿ ಹೆಚ್.ಜಿ.ಎಫ್ ನವೀನ್ ಕುಮಾರ್ ಹಾಗೂ ಜೇಸಿಐ ಸುಳ್ಯ ಪಯಸ್ವಿನಿಯ ಸದಸ್ಯರು ಉಪಸ್ಥಿತರಿದ್ದರು.
ಜೇಸಿ ಮಹೇಶ್ ಮೇರ್ಕಜೆ ವೇದಿಕೆಗೆ ಆಹ್ವಾನಿಸಿ ಪ್ರಶಾಂತ್ ಅಂಬೆಕಲ್ಲು ಜೇಸಿ ವಾಣಿ ವಾಚಿಸಿದರು. ಜೇಸಿ ಸತ್ಯಶಾಂತಿತ್ಯಾಗಮೂರ್ತಿ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿ ಕಾರ್ಯದರ್ಶಿ ಜೇಸಿ.ಹೆಚ್.ಜಿ.ಎಫ್ ತಾರಾ ಮಾಧವ ಚೂಂತಾರು ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading