ಪೆರಾಜೆ : ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ವ್ಯಕ್ತಿ – ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಕಾರು ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪೆರಾಜೆ ಸಮೀಪ ವ್ಯಕ್ತಿಯೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮೇ.26 ರಂದು ಮದ್ಯಾಹ್ನ ಸಂಭವಿಸಿದೆ. ಈ ಘಟನೆಯನ್ನು ಕಾರಿನ ಹಿಂಭಾಗದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಮಾಡಿದ್ದಾರೆ. ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ಕಾರು ಹಿಂಬದಿಯಿಂದ ಬರುತ್ತಿದ್ದ ಟಿ.ಟಿ ವಾಹನಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಮಧ್ಯಕ್ಕೆ ಬಂದು ನಿಂತಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನ ಮುಂಭಾಗ ಟಿ.ಟಿ ವಾಹನದ ಹಿಂಭಾಗಕ್ಕೆ ತಗುಲಿದ ಕಾರಣ ಕಾರಿನ ಮುಂಭಾಗ ಜಖಂಗೊಂಡಿದ್ದು, ಟಿ.ಟಿ ವಾಹನವೂ ಸ್ವಲ್ಪ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಈ ಕಾರು ಯಾರಿಗೆ ಸೇರಿದ್ದು ಎನ್ನುವ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading